LatestTop Storiesಚಿಕ್ಕಬಳ್ಳಾಪುರ-Chikkaballapuraಜಿಲ್ಲಾ ಸುದ್ದಿಗಳು | District Newsರಾಜ್ಯ-Karnataka

ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಟ್ಯಾಂಕರ್ ಗಳು

ಚಿಕ್ಕಬಳ್ಳಾಪುರ,ಜು.9: ದೊಡ್ಡಬಳ್ಳಾಪುರ ತಾಲೂಕಿನ 11ನೇ ಮೈಲಿ ಬಳಿ ಪೆಟ್ರೋಲ್ ಟ್ಯಾಂಕರ್ ಲಾರಿ ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದಿರುವ ಘಟನೆ ನಡೆದಿದೆ.


ಸದ್ಯ ಪೆಟ್ರೋಲ್ ಟ್ಯಾಂಕರ್ ಲಾರಿ ಧಗಧಗನೆ ಹೊತ್ತಿ ಉರಿಯುತ್ತಿದ್ದಂತೆ, ಅಗ್ನಿ ಜ್ವಾಲೆ ಪಕ್ಕದಲ್ಲಿ ರಿವರ್ಸ್ ತೆಗೆಯುತ್ತಿದ್ದ ಹಾಲಿನ ಟ್ಯಾಂಕರ್‌ಗೂ ವ್ಯಾಪಿಸಿದ್ದು, ಚಾಲಕರು ಸಮಯಕ್ಕೆ ಸರಿಯಾಗಿ ಲಾರಿಯಿಂದ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ.ಆದರೆ ಎರಡೂ ಲಾರಿಗಳು ಬಹುತೇಕ ಸುಟ್ಟು ಭಸ್ಮ ಆಗಿವೆ.


ಇನ್ನು ವಿಷಯ ತಿಳಿಯುತ್ತಿದ್ದಂತೆ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಇದೇ ವೇಳೆ ಅಪಘಾತಕ್ಕೆ ಅತಿವೇಗದ ಚಾಲನೆಯೇ ಕಾರಣ ಎಂದು ಹೇಳಲಾಗಿದ್ದು,ಈ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share with Friends
author avatar
Digital Desk