
ಶಾಲೆಗೆ ಮದ್ಯ ಸೇವಿಸಿ ಬಂದ ಶಿಕ್ಷಕ..? ಗ್ರಾಮಸ್ಥರಿಂದ ತರಾಟೆ, ವಿಡಿಯೋ ವೈರಲ್
ರಾಯಚೂರು: ಶಾಲೆಗೆ ಮದ್ಯ ಸೇವಿಸಿ ಬಂದಿದ್ದಾರೆ ಎನ್ನಲಾದ ಶಿಕ್ಷಕರೊಬ್ಬರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಕೋಟೆಕಲ್ ಗ್ರಾಮದಲ್ಲಿ ನಡೆದಿದೆ.
ಕೋಟೆಕಲ್ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮದ್ಯ ಸೇವಿಸಿ ಶಾಲೆಗೆ ಬಂದಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಶಿಕ್ಷಕರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಶಾಲಾ ಶಿಕ್ಷಕರ ಕರ್ತವ್ಯ ನಿರ್ವಹಣೆ, ಶಿಸ್ತು ಹಾಗೂ ವಿದ್ಯಾರ್ಥಿಗಳ ಶಿಕ್ಷಣದ ವಾತಾವರಣದ ಬಗ್ಗೆ ಗ್ರಾಮಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಘಟನೆ ಕುರಿತು ಸಂಬಂಧಪಟ್ಟ ಶಿಕ್ಷಣ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ, ಆರೋಪದಲ್ಲಿ ಸತ್ಯಾಂಶವಿದ್ದರೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸದ್ಯ ವೈರಲ್ ಆಗಿರುವ ವಿಡಿಯೋ ಕುರಿತು ಅಧಿಕೃತ ಪರಿಶೀಲನೆ ನಡೆದ ಬಳಿಕವೇ ಘಟನೆಯ ಸಂಪೂರ್ಣ ಸತ್ಯಾಂಶ ಹೊರಬರಬೇಕಿದೆ.
