Latestಕ್ರೀಡೆ-Sports

ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ

ಬಾರ್ಬಡೋಸ್​ನಿಂದ ಗುರುವಾರ ಮುಂಜಾನೆ ದೆಹಲಿಗೆ ಬಂದಿಳಿದ ಟೀಮ್ ಇಂಡಿಯಾ (Team India) ಆಟಗಾರರು ಮತ್ತು ಸಿಬ್ಬಂದಿಗಳು, 11 ಗಂಟೆಗೆ ನವದೆಹಲಿಯ ಲೋಕ್ ಕಲ್ಯಾಣ್ ಮಾರ್ಗ್‌ನಲ್ಲಿರುವ ಪ್ರಧಾನಿ ನಿವಾಸಕ್ಕೆ ಆಗಮಿಸಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿಯಾಗಿದ್ದಾರೆ.

ರೋಹಿತ್ ಶರ್ಮಾ ನೇತೃತ್ವದ ಭಾರತ ಕ್ರಿಕೆಟ್ ತಂಡವು ಇಂದು ತವರಿಗೆ ಬಂದಿದ್ದು, ಮೋದಿಯವರನ್ನ ಭೇಟಿಯಾಗಿದ್ದಾರೆ. ಈ ವೇಳೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಹಾಗೂ ಕಾರ್ಯದರ್ಶಿ ಜಯ್​ ಶಾ ಕೂಡ ಹಾಜರಿದ್ದರು.

ಬರೋಬ್ಬರಿ 17 ವರ್ಷಗಳ ಬಳಿಕ ಭಾರತ ವಿಶ್ವಕಪ್‌ ಗೆದ್ದು ಆಗಮಿಸಿದ ಟೀಮ್ ಇಂಡಿಯಾವನ್ನು ಪ್ರಧಾನಿ ಮೋದಿ ಸ್ವಾಗತಿಸಿದ್ದಾರೆ. ಕೆಲ ಹೊತ್ತು ಕುಶಲೋಪರಿ ನಡೆಸಿದರು. ಅಲ್ಲದೆ ಆ ಬಳಿಕ ಟೀಮ್ ಇಂಡಿಯಾ ಆಟಗಾರರು ಪ್ರಧಾನಿಯೊಂದಿಗೆ ಟಿ20 ವಿಶ್ವಕಪ್ ಹಿಡಿದು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಇದೀಗ ಭಾರತ ತಂಡದ ಆಟಗಾರರೊಂದಿಗಿನ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ಟೀಮ್ ಇಂಡಿಯಾ ಆಟಗಾರರು ಮುಂಬೈಗೆ ತೆರಳಿದ್ದಾರೆ. ಇಂದು ಸಂಜೆ ಭಾರತ ತಂಡ ವಿಜಯಯಾತ್ರೆ ನಡೆಯಲಿದ್ದು, ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ದೆಹಲಿಯಿಂದ ಮುಂಬೈನತ್ತ ಪ್ರಯಾಣ ಬೆಳೆಸಿದ್ದಾರೆ. ಮುಂಬೈನ ನಾರಿಮನ್ ಪಾಯಿಂಟ್‌ನಲ್ಲಿರುವ ಏರ್ ಇಂಡಿಯಾ ಕಟ್ಟಡದಿಂದ ಪ್ರಾರಂಭವಾಗಲಿರುವ ಈ ವಿಜಯಯಾತ್ರೆಯು ವಾಂಖೆಡೆ ಸ್ಟೇಡಿಯಂನಲ್ಲಿ ಕೊನೆಗೊಳ್ಳಲಿದೆ.

https://youtu.be/JCrzNBZiNqk?si=oUmctOmPCLz1d0qK

ಇದಾದ ಬಳಿಕ ವಾಂಖೆಡೆ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾದ ವಿಜಯೋತ್ಸವ ಜರುಗಲಿದೆ. ಇದೇ ವೇಳೆ ಭಾರತ ತಂಡಕ್ಕೆ 125 ಕೋಟಿ ರೂ.ಗಳ ಬಹುಮಾನವನ್ನು ಬಿಸಿಸಿಐ ಹಸ್ತಾಂತರಿಸಲಿದೆ.

Share with Friends
author avatar
News Desk