BlogLatestTop Storiesಬೆಂಗಳೂರು-Bengaluru

ಭೀಕರ ಅಪಘಾತ : ಗರ್ಭಿಣಿ ಮೇಲೆ ಹರಿದ ಲಾರಿ, ಹೊಟ್ಟೆಯಿಂದ ಹೊರಬಂದು ಒದ್ದಾಡಿ ಸಾವನ್ನಪ್ಪಿದ ಶಿಶು

ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಟಿಪ್ಪರ್ ಲಾರಿ ಡಿಕ್ಕಿಯಾಗಿ ಗರ್ಭಿಣಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ಗರ್ಭಿಣಿ ಎಡೇಹಳ್ಳಿಯ ಸಿಂಚನಾ (30) ಕೂಡಾ ಸಾವನ್ನಪ್ಪಿದ್ದಾರೆ. ಸಿಂಚನಾ ಹೊಟ್ಟೆಯಲ್ಲಿದ್ದ 8 ತಿಂಗಳ ಮಗು ಹೊರಬಂದು ಒದ್ದಾಡಿ ಸಾವನ್ನಪ್ಪಿದೆ.

ಸಿಂಚನಾಗೆ ಬರುವ ಆಗಸ್ಟ್​ 17ಕ್ಕೆ 8 ಮುಗಿದು 9 ತಿಂಗಳು ತುಂಬುತ್ತಿತ್ತು. ಹೀಗಾಗಿ ಹೆರಿಗೆ ಸುಸೂತ್ರವಾಗಿ ಆಗಲಿ ಎಂದು ದಂಪತಿ ಬೈಕ್ ನಲ್ಲಿ​​ ದಾಬಸ್​ ಪೇಟೆಯಲ್ಲಿರುವ ಶಿವಗಂಗೆಯ ಗಣಪತಿ ದೇವಸ್ಥಾನಕ್ಕೆ ತೆರಳಿದ್ದರು.

ಈ ವೇಳೆ ವೇಗವಾಗಿ ಬಂದ ಟಿಪ್ಪರ್​ ಡಿಕ್ಕಿ ಹೊಡೆದಿದೆ. ಆಗ ಸಿಂಚನಾ ಬೈಕ್ ನಿಂದ ಕೆಳಗೆ ಬಿದ್ದಿದ್ದಾರೆ. ಬಳಿಕ ಟಿಪ್ಪರ್ ​ಸಿಂಚನಾ ಮೇಲೆ ಹರಿದ ಪರಿಣಾಮ ಹೊಟ್ಟೆಯಲ್ಲಿದ್ದ 8 ತಿಂಗಳು ಮಗು ಹೊರಗೆ ಬಂದಿದೆ. ನಡು ರಸ್ತೆಯಲ್ಲೇ ಮಗು ವಿಲ ವಿಲ ಒದ್ದಾಡಿ ಮೃತಪಟ್ಟಿದೆ.ಸಿಂಚನಾ ಪತಿ ಮಂಜುನಾಥ್ ಜೀವಾಪಾಯದಿಂದ ಪಾರಾಗಿದ್ದಾರೆ.

ಅಪಘಾತದ ಭೀಕರತೆ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಇನ್ನು ಮೃತ ಮಹಿಳೆಯ ಗಂಡ ಆಕ್ರಂದನ ಮುಗಿಲು ಮುಟ್ಟಿತ್ತು. ಕಣ್ಣೀರು ಹಾಕಿದ್ದಾರೆ. ಸ್ಥಳದಲ್ಲೇ ಪ್ರಜ್ಞೆ ತಪ್ಪಿದಂತೆ ಪತಿಯನ್ನು ಸ್ಥಳೀಯರು ಸಮಾಧಾನ ಮಾಡಿದರು. ಘಟನೆ ಬಳಿಕ ಕೆಲ ಕಾಲ ವಾಹನ ದಟ್ಟಣೆಯಾಗಿದ್ದು, ಸಂಚಾರಿ ಪೊಲೀಸರು ಆಗಮಿಸಿ ಸಂಚಾರ ಸುಗಮಗೊಳಿಸಿದ್ದಾರೆ.

Share with Friends
author avatar
News Desk