Latestರಾಷ್ಟ್ರೀಯ-National

ಜಮ್ಮು ಕಾಶ್ಮೀರದ ಕಥುವಾದಲ್ಲಿ ಉಗ್ರರರ ದಾಳಿ- ಇಬ್ಬರು ಉಗ್ರರ ಎನ್‌ಕೌಂಟರ್‌

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಕಥುವಾ ಗ್ರಾಮವೊಂದರಲ್ಲಿ ಮಂಗಳವಾರ ತಡರಾತ್ರಿ ಗುಂಡಿನ ದಾಳಿ ನಡೆಸಿದ್ದ ಇಬ್ಬರು ಉಗ್ರರನ್ನು ಎನ್‌ಕೌಂಟರ್‌ನಲ್ಲಿ (Kathua Encounter) ಹತ್ಯೆ ಮಾಡಲಾಗಿದೆ.

ಈ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಅರೆಸೇನಾಪಡೆಯ ಯೋಧರೊಬ್ಬರು ಕೂಡ ಸಾವನ್ನಪ್ಪಿದ್ದಾರೆ. ಜಮ್ಮುವಿನಲ್ಲಿ ರಾತ್ರೋರಾತ್ರಿ ಆರಂಭವಾದ 2 ಎನ್‌ಕೌಂಟರ್‌ಗಳು ಬೆಳಗಿನ ಜಾವದವರೆಗೂ ನಡೆದಿದೆ. ಅಲ್ಲಿ ಐವರು ಸೈನಿಕರು ಮತ್ತು ವಿಶೇಷ ಪೊಲೀಸ್ ಅಧಿಕಾರಿ (SPO) ಸೇನಾ ಪೋಸ್ಟ್‌ನ ಮೇಲಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ವಿಮಾನ ನಿಲ್ದಾಣ ಆಯ್ತು ಇದೀಗ ಮೆಂಟಲ್ ಆಸ್ಪತ್ರೆಗೆ ಬಾಂಬ್​ ಬೆದರಿಕೆ

https://youtu.be/uNnqF6b4wzw?si=ApEES0M5Yz_0arFx

ನಿನ್ನೆ ಸಂಜೆ ಕಥುವಾ ದಾಳಿಯಲ್ಲಿ ಇಬ್ಬರು ಭಯೋತ್ಪಾದಕರು ಭಾಗಿಯಾಗಿದ್ದು, ಅವರಲ್ಲಿ ಒಬ್ಬನನ್ನು ನಿನ್ನೆ ರಾತ್ರಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡನೇ ಭಯೋತ್ಪಾದಕ ಯುಎಸ್ ನಿರ್ಮಿತ ಎಂ4 ಕಾರ್ಬೈನ್ ಅಸಾಲ್ಟ್ ರೈಫಲ್‌ನೊಂದಿಗೆ ಶಸ್ತ್ರಸಜ್ಜಿತನಾಗಿದ್ದನು. ಆತ ಅರಣ್ಯ ಪ್ರದೇಶದಲ್ಲಿ ಅಡಗಿಕೊಂಡಿದ್ದ. ಆತನನ್ನು ಇಂದು ಬೆಳಿಗ್ಗೆ ಎನ್​ಕೌಂಟ್ ಮಾಡಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಕುವೈತ್‌ನಲ್ಲಿ ಅಗ್ನಿ ಅವಘಡ- 4 ಭಾರತೀಯರು ಸೇರಿ 35 ಜನರ ಸಜೀವ ದಹನ

https://youtu.be/lMx1027RUBE?si=H-xr3LykL8GBgY7y

ಅಡಗಿಕೊಂಡಿದ್ದ ಭಯೋತ್ಪಾದಕರು ಹಲವಾರು ಮನೆಗಳಿಗೆ ತೆರಳಿ ನೀರು ಕೇಳಿದರು. ಇದರಿಂದ ಗ್ರಾಮಸ್ಥರು ಅನುಮಾನಗೊಂಡರು. ಈ ಬಗ್ಗೆ ಕೆಲವು ಗ್ರಾಮಸ್ಥರು ಎಚ್ಚರಿಕೆ ನೀಡಿದಾಗ ಗುಂಡು ಹಾರಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಒಬ್ಬ ನಾಗರಿಕ ಗಾಯಗೊಂಡಿದ್ದಾನೆ. ಇದನ್ನೂ ಓದಿ: ಬೀದರ್‌ನಲ್ಲಿ ಭಾರೀ ಮಳೆ-ಕೆರೆ ಒಡೆದು ಜಮೀನಿಗೆ ನುಗ್ಗಿದ ನೀರು

https://youtu.be/wKlCwzdj9LU?si=E22F4eL8h_pSh4k1

ಜಮ್ಮುವಿನಲ್ಲಿ ಈ 2 ಭಯೋತ್ಪಾದಕ ಘಟನೆಗಳು ನಡೆಯುವ ಕೇವಲ 2 ದಿನಗಳ ಮೊದಲು, ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ರಿಯಾಸಿಯಲ್ಲಿ ದಾಳಿಗೆ ಒಳಗಾಗಿತ್ತು. ಗುಂಡಿನ ದಾಳಿಯಿಂದ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿತ್ತು. ಈ ವೇಳೆ 9 ಪ್ರಯಾಣಿಕರು ಸಾವನ್ನಪ್ಪಿದ್ದರು ಮತ್ತು 30 ಜನ ಗಾಯಗೊಂಡಿದ್ದರು. ಇದನ್ನೂ ಓದಿ:ಇನ್‍ಸ್ಟಾದಲ್ಲಿ ದರ್ಶನ್ ಅನ್‍ಫಾಲೋ‌, ಡಿಪಿ ಡಿಲೀಟ್ ಮಾಡಿದ ಪತ್ನಿ ವಿಜಯಲಕ್ಷ್ಮಿ

https://youtu.be/FHqtzTrSrK0?si=Cf2z8ptk2xO8GbNc
Share with Friends
author avatar
News Desk