
ಬೆಳಗಾವಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.
ಬೆಳಗಾವಿ: ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಹಾಗೂ ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಧ್ವಜಾರೋಹಣದ ಬಳಿಕ ಸಚಿವ ಸತೀಶ್ ಜಾರಕಿಹೊಳಿ ಅವರು ಗೌರವ ವಂದನೆ ಸ್ವೀಕರಿಸಿದರು.ಇನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಆಕರ್ಷಕ ಪಥಸಂಚಲನ ಕಾರ್ಯಕ್ರಮ ಗಮನ ಸೆಳೆಯಿತು. ಪೊಲೀಸರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 10ಕ್ಕೂ ಹೆಚ್ಚು ತಂಡಗಳು ಪಥಸಂಚಲನದಲ್ಲಿ ಭಾಗವಹಿಸಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.
ಪಥಸಂಚಲನದ ವೇಳೆ ವಿದ್ಯಾರ್ಥಿಗಳು ಹಾಗೂ ಪೊಲೀಸ್ ಸಿಬ್ಬಂದಿಯ ಶಿಸ್ತುಬದ್ಧ ಹೆಜ್ಜೆ ಹಾಕುವಿಕೆ ಪ್ರೇಕ್ಷಕರ ಗಮನ ಸೆಳೆಯಿತು.
ಒಟ್ಟಾರೆ, ಬೆಳಗಾವಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.
