LatestTop StoriesUncategorizedಬೆಂಗಳೂರು-Bengaluru

ಆ.13ರ ಕರ್ನಾಟಕ ಬಂದ್‌ಗೆ ಕರವೇ ಬೆಂಬಲ ಇಲ್ಲ

ಬೆಂಗಳೂರು, ಜು.31: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿರುವ ಬಂದ್‌ಗೆ ತಮ್ಮ ಸಂಘಟನೆಯ ಬೆಂಬಲ ಇಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಸ್ಪಷ್ಟಪಡಿಸಿದ್ದಾರೆ.

ವಾಟಾಳ್ ನಾಗರಾಜ್ ಬಗ್ಗೆ ಅಪಾರ ಗೌರವ ಇದೆ. ಆದರೆ ಪದೇ ಪದೇ ಬಂದ್ ನಡೆಸುವುದರಿಂದ ಸರ್ಕಾರಕ್ಕೂ ಜನರಿಗೂ ನಷ್ಟವಾಗುತ್ತದೆ. ಈ ಬಾರಿ ಕಾವೇರಿ ಹೋರಾಟವನ್ನು ದೆಹಲಿಗೆ ಕೊಂಡೊಯ್ಯುತ್ತೇವೆ.ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ಮುಂದಾಗಿದ್ದೇವೆ. ಹೊಸ ತಲೆಮಾರಿನ ಮಾದರಿಯ ಹೋರಾಟ ರೂಪಿಸಲಾಗುವುದು ಎಂದು ಹೇಳಿದರು.

ಒಟ್ಟಾರೆ,ಆ.13ರ ಕರ್ನಾಟಕ ಬಂದ್ ಯಶಸ್ವಿಗೊಳಿಸಲು ಕನ್ನಡ ಸಂಘಟನೆಗಳು ವ್ಯಾಪಕ ಸಿದ್ಧತೆ ನಡೆಸಿದ್ದು, ಸಾರ್ವಜನಿಕರ ಸಹಕಾರ ಕೋರಿವೆ. ಆದರೆ ವಿವಿಧ ಸಂಘಟನೆಗಳ ಭಿನ್ನ ನಿಲುವಿನ ನಡುವೆ ಬಂದ್‌ಗೆ ಎಷ್ಟರ ಮಟ್ಟಿನ ಸ್ಪಂದನೆ ಸಿಗಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

Share with Friends
author avatar
Digital Desk