ಹೊಸ ವರ್ಷಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗಬುದು : ಕುಮಾರ್ ಬಂಗಾರಪ್ಪ
ಬೆಂಗಳೂರು : ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಜನವರಿಯಲ್ಲಿ ಬದಲಾಗುವ ನಿರೀಕ್ಷೆ ಇದೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಭವಿಷ್ಯ ನುಡಿದಿದ್ದಾರೆ. ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಗುವ ನಿರೀಕ್ಷೆ ಇದೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಮೋದಿ ಸರ್ಕಾರದಲ್ಲಿ ಜೆಪಿ ನಡ್ದದ ಸಚಿವರಾಗಿದ್ದರಿಂದ ಬಿಜೆಪಿ ರಾಷ್ಟ್ರಾಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬಹುದು. ಈ ಹಿನ್ನೆಲೆ ಬಿಜೆಪಿ ರಾಷ್ಟ್ರಾಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರ ಸ್ಥಾನಗಳು ಖಾಲಿಯಾಗಲಿವೆ. ಅಲ್ಲದೆ ನಾನು ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದೂ ಕುಮಾರ್ ಬಂಗಾರಪ್ಪ ಇಂಗಿತ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಬಿಜೆಪಿಯಲ್ಲಿನ ಭಿನ್ನಮತವನ್ನು ಬಿಜೆಪಿ ಕೈಕಮಾಂಡ್ ಗಮನಿಸಿದೆ. ಹಾಗಾಗಿ ಈ ವಿಚಾರದಲ್ಲಿ ಹೈಕಮಾಂಡ್ ಸ್ಪಷ್ಟ ನಿಲುವು ತೆಗೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ನಾನು ಕಳೆದ 30 ವರ್ಷದಿಂದ ರಾಜಕೀಯದಲ್ಲಿ ಇದ್ದೇನೆ ಎಂದಿದ್ದಾರೆ.
ಕಾಂಗ್ರೆಸ್ ಅಹಿಂದ ಸಂಘಟನೆಯಾಗಿದೆ. ಅದಕ್ಕೆ ವಿರುದ್ಧವಾಗಿ ಬಿಜೆಪಿ ಕೂಡ ಒಬಿಸಿ ಸಮುದಾಯದ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕಾಗಿದೆ. ಹಾಗಾಗಿ ಬಿಜೆಪಿಯು ಒಬಿಸಿ ನಾಯಕರಿಗೆ ಆದ್ಯತೆ ಕೊಡಬೇಕು. ಒಂದು ವೇಳೆ ಏನಾದರೂ ಒಬಿಸಿ ಸಮುದಾಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುವುದಾದರೆ, ನನ್ನ ಹೆಸರನ್ನೇ ಪರಿಗಣಿಸಿ ಎಂದು ಹೇಳಿದ್ದೇನೆ. ಹಾಗಾಗಿ ಬರುವ ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಗುವ ಸಾಧ್ಯತೆ ಇದೆ. ಮುಂದೆ ಏನಾಗುತ್ತೋ ಕಾದು ನೋಡಬೇಕು ಎಂದಿದ್ದಾರೆ.
