LatestTop Storiesಚಿಕ್ಕಮಗಳೂರು-Chikkamagaluruಜಿಲ್ಲಾ ಸುದ್ದಿಗಳು | District News

ವ್ಯಕ್ತಿ ಶವ ಹೂತು ಹಾಕಿದ್ದ ಮೂವರ ಬಂಧನ!

ಚಿಕ್ಕಮಗಳೂರು,ಜು.27:ಕಾಡುಹಂದಿ ಶಿಕಾರಿಗೆಂದು ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದ ವ್ಯಕ್ತಿಯೊಬ್ಬರ ಶವವನ್ನು ಹೂತುಹಾಕಿದ್ದ ಮೂವರನ್ನು ಯಗಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗ್ರಾಮದ ಕರಿಯಪ್ಪ (55) ಮೃತಪಟ್ಟ ದುರದೃಷ್ಟಕರ ವ್ಯಕ್ತಿಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಅದೇ ಗ್ರಾಮದ ಚಂದ್ರಪ್ಪ, ಕೆಂಚಪ್ಪ ಮತ್ತು ಯದುಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ದೊಣ್ಣೆಕೋರನಹಳ್ಳಿ ಗ್ರಾಮದ ಬಳಿ ಆರೋಪಿಗಳು ಕಾಡುಹಂದಿ ಬೇಟೆಯಾಡಲು ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿದ್ದರು. ಈ ವೇಳೆ ಅಲ್ಲಿಗೆ ತೆರಳಿದ್ದ ಕರಿಯಪ್ಪ ಆಕಸ್ಮಿಕವಾಗಿ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಘಟನೆಯಿಂದ ಗಾಬರಿಗೊಂಡ ಆರೋಪಿಗಳು, ಪ್ರಕರಣದಿಂದ ನುಣುಚಿಕೊಳ್ಳಲು ಯಾರಿಗೆ ವಿಷಯ ತಿಳಿಯದಂತೆ ಕರಿಯಪ್ಪ ಶವವನ್ನು ಗುಟ್ಟಾಗಿ ಹೂತುಹಾಕಿ ಪುರಾವೆ ನಾಶಪಡಿಸಲು ಯತ್ನಿಸಿದ್ದಾರೆ.
ಆದರೆ ಪ್ರಕರಣದ ಬೆನ್ನತ್ತಿದ ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಸುದೀರ್ಘವಾಗಿ ಪರಿಶೀಲಿಸಿದಾಗ ಅಸಲಿ ಸತ್ಯ ಹೊರಬಿದ್ದಿದೆ.ಸದ್ಯ ಯಗಟಿ ಠಾಣೆ ಪೊಲೀಸರು ಮೂವರನ್ನೂ ಬಂಧಿಸಿದ್ದು,ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.

Share with Friends
author avatar
Digital Desk