BlogLatestTop Storiesರಾಜ್ಯ-Karnataka

ಜಮ್ಮು-ಕಾಶ್ಮೀರದ ಸೇನಾ ವಾಹನ ಕಂದಕಕ್ಕೆ ಉರುಳಿ ಕರ್ನಾಟಕದ ಮೂವರು ಯೋಧರು ಹುತಾತ್ಮ

ಬೆಂಗಳೂರು : ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್‌ನ ಬಲ್ನೋಯಿ ಪ್ರದೇಶದಲ್ಲಿ ಸೇನಾ ವಾಹನ 150 ಅಡಿ ಕಂದಕಕ್ಕೆ ಉರುಳಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಒಟ್ಟು ಐವರು ಹುತಾತ್ಮರಾಗಿದ್ದು, ಒಬ್ಬರು ಗಾಯಗೊಂಡಿದ್ದರು.

ಹುತಾತ್ಮ ಯೋಧರನ್ನು ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45) ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಎಂದು ಗುರುತಿಸಲಾಗಿದೆ.

ಸುದ್ದಿ ತಿಳಿದು ಹುತಾತ್ಮ ಯೋಧರ ಸಂಬಂಧಿಕರು ಹಾಗೂ ಸ್ನೇಹಿತರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಸುಬೇದಾರ್ ದಯಾನಂದ ಅವರ ಕೆಲವು ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ.

ಮಹಾಲಿಂಗಪುರದ ಮಹೇಶ್ ಮಾರಿಗೊಂಡ ಕಳೆದ ಆರು ವರ್ಷಗಳಿಂದ 11ನೇ ಮರಾಠಾ ರೆಜಿಮೆಂಟ್​​ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮೂರು ವರ್ಷದ ಹಿಂದೆ ಮಹೇಶ್ ನಾಗಪ್ಪ ಮಾರಿಗೊಂಡ ಅವರ ವಿವಾಹವಾಗಿತ್ತು. ಯೋಧ ಅನೂಪ್ ಕಳೆದ 13 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅನುಪ್​ ದಂಪತಿಗೆ ಎರಡು ವರ್ಷದ ಪುಟ್ಟ ಮಗು ಇದೆ.

ಸಿಎಂ ಸಂತಾಪ :
ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದರು. ಜಮ್ಮು ಕಾಶ್ಮೀರದ ಪೂಂಚ್​ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕರ್ನಾಟಕದ ಯೋಧರಾದ ಧರ್ಮರಾಜ ಸುಭಾಷ ಖೋತ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು. ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ದೇಶ ಸೇವೆಗಾಗಿ ಜೀವ ಮುಡಿಪಿಟ್ಟ ಈ ಹುತಾತ್ಮ ಯೋಧರ ತ್ಯಾಗ, ಬಲಿದಾನವನ್ನು ನಾಡು ಸದಾಕಾಲ ಸ್ಮರಿಸಲಿದೆ.

Share with Friends
author avatar
News Desk