Crime NewsEntertainmentLatestಬೆಂಗಳೂರು-Bengaluru

ಇಂದು ಜೈಲಿಗೆ ದರ್ಶನ್ ಕುಟುಂಬ ಭೇಟಿ- ತಾಯಿ ನೋಡಿ ದರ್ಶನ್‌ ಭಾವುಕ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ (Darshan) ಅರೆಸ್ಟ್ ಆಗಿದ್ದಾರೆ. ದರ್ಶನ್‌ರನ್ನು ನೋಡಲು ತಾಯಿ ಮೀನಾ, ಪತ್ನಿ ಮತ್ತು ಮಗ ಜೈಲಿಗೆ ಭೇಟಿ ನೀಡಿದ್ದಾರೆ. ಈ ವೇಳೆ, ತಾಯಿಯನ್ನು ನೋಡಿ ದರ್ಶನ್‌ ಕಣ್ಣೀರಿಟ್ಟಿದ್ದಾರೆ.

ಇಂದು (ಜು.1) ಬೆಳಗ್ಗೆ ದರ್ಶನ್ ತಾಯಿ ಮೀನಾ, ತಮ್ಮ ದಿನಕರ್, ಪತ್ನಿ ವಿಜಯಲಕ್ಷ್ಮೀ ಹಾಗೂ ಪುತ್ರ ವಿನೀಶ್ ಭೇಟಿ ನೀಡಿದ್ದಾರೆ. ಸದ್ಯ ನಗರದ ಹೊರವಲಯದಲ್ಲಿರುವ ಜೈಲಿಗೆ ಮಾಧ್ಯಮಗಳ ಕಣ್ಣು ತಪ್ಪಿಸಲು ಖಾಸಗಿ ವಾಹನದಲ್ಲಿ ಬಂದ ದರ್ಶನ್ ಕುಟುಂಬ ಜೈಲಿನ ಒಳಗೆ ಹೋಗಿ ಭೇಟಿ ಮಾಡಿದೆ. ಇದನ್ನೂ ಓದಿ: 75ನೇ ವರ್ಷಕ್ಕೆ ಕಾಲಿಟ್ಟಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು- ಶುಭ ಕೋರಿದ ಪ್ರಧಾನಿ ಮೋದಿ

https://youtu.be/5baaPtkP0Q4?si=m4MGA67MXnqWrN2k

ಮಗನ ಸ್ಥಿತಿ ನೋಡ್ತಿದ್ದಂತೆ ತಾಯಿ ಮೀನಾ ತೂಗುದೀಪ್ ಭಾವುಕರಾಗಿದ್ದಾರೆ. ದರ್ಶನ್‌ಗೆ ಸಹೋದರ ದಿನಕರ್ ಧೈರ್ಯ ತುಂಬಿದ್ದಾರೆ. ಮುಂದಿನ ಕಾನೂನು ಹೋರಾಟಕ್ಕೆ ಕುಟುಂಬಸ್ಥರ ಜೊತೆ ಚರ್ಚಿಸಿದ್ದಾರೆ.

ಇದೀಗ ಖಾಸಗಿ ವಾಹನದಲ್ಲೇ ದರ್ಶನ್ ಕುಟುಂಬ ಭೇಟಿ ನೀಡಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಬಂಧಿಖಾನೆ ಇಲಾಖೆ ಕಾನೂನನ್ನು ಗಾಳಿಗೆ ತೂರಿ ರಾಜಾತಿಥ್ಯ ನೀಡಿದೆ. ಸಾಮಾನ್ಯರು ಜೈಲಿಗೆ ಎಂಟ್ರಿ ಕೊಡಬೇಕಾದರೆ ಹತ್ತಾರು ರೂಲ್ಸ್ ಹೇಳುತ್ತಾರೆ. ಅದೇ ನಟ ದರ್ಶನ್ ಕುಟುಂಬಕ್ಕೆ ಮಾತ್ರ ಕಂಡಿಷನ್ ಇಲ್ಲವೆಂಬಂತಾಗಿದೆ ಎಂದು ಅನೇಕರು ದೂರಿದ್ದಾರೆ. ಇದನ್ನೂ ಓದಿ: ಸಿಬಿಐ ಬಂಧನ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

https://youtu.be/IXQ_w27BIRk?si=Cwxl1qpTsUfy88dq

ಇನ್ನೂ ಜೈಲು ನಿಯಮಗಳ ಪ್ರಕಾರ, ಒಂದು ವಾರದಲ್ಲಿ ಮೂವರಿಗೆ ಮಾತ್ರ ಭೇಟಿ ಮಾಡಲು ಅವಕಾಶ ಇರುತ್ತದೆ. ಕಳೆದ ವಾರ ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ಭೇಟಿ ಮಾಡಿದ್ದರು. ನಂತರ ನಟ ವಿನೋದ್ ಪ್ರಭಾಕರ್, ರಕ್ಷಿತಾ ಪ್ರೇಮ್ ದಂಪತಿ ಭೇಟಿ ಮಾಡಿ ಮಾತನಾಡಿದ್ದರು. ಇದನ್ನೂ ಓದಿ: ಪುಣೆಯಲ್ಲಿ ನೋಡ ನೋಡುತ್ತಿದ್ದಂತೆ ನೀರಿನಲ್ಲಿ ಕೊಚ್ಚಿ ಹೋದ ಒಂದೇ ಕುಟುಂಬ- ಐವರು ಸಾವು

Share with Friends
author avatar
News Desk