BlogEntertainmentLatest

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಅರೆಸ್ಟ್

ಹೈದರಾಬಾದ್ : ಸಹ ಕೊರಿಯೋಗ್ರಾಫರ್‌ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ( ಶಾಯಿಕ್‌ ಜಾನಿ ಭಾಷಾ)ನನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಅವರ ಜೊತೆ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರು ರಾಯದುರ್ಗ ಪೊಲೀಸ್‌ ಸ್ಟೇಷನ್‌ನಲ್ಲಿ ದೂರು ದಾಖಲಿಸಿದ್ದಾರೆ. ಆತ ತನ್ನ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿ ದೈಹಿಕ ಹಲ್ಲೆ ನಡೆಸಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದರು. ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ಈಗ ಜಾನಿ ಮಾಸ್ಟರ್‌ ಅರೆಸ್ಟ್‌ ಮಾಡಿದ್ದಾರೆ. ಈ ಪ್ರಕರಣವನ್ನು ನರಸಿಂಗಿ ಪೊಲೀಸ್‌ ಠಾಣೆಗೆ ವರ್ಗಾಯಿಸಲಾಗಿದೆ.

ಹೊರಾಂಗಣ ಚಿತ್ರೀಕರಣ ವೇಳೆ, ದೈಹಿಕ ಹಲ್ಲೆ ಮತ್ತು ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದರು. ಯುವತಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು.

ಜನಸೇನಾ ಪಕ್ಷದ ಸ್ಟಾರ್ ಪ್ರಚಾರಕರಾಗಿ ಕೆಲಸ ಮಾಡಿದ್ದ ಜಾನಿಯನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಮತ್ತೊಂದೆಡೆ ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿ ಕೂಡಾ ಜಾನಿ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ.

Share with Friends
author avatar
News Desk