LatestTop Storiesಬೆಂಗಳೂರು-Bengaluru

ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ : ಇಬ್ಬರ ಸಾ*

ದೇವನಹಳ್ಳಿ.ಅ.7- ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬ್ಯಾಡರಹಳ್ಳಿ ಗೇಟ್ ಬಳಿ ನಡೆದಿದೆ.

ಮೃತರನ್ನು ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯ ನಿವಾಸಿಗಳಾದ ಧನುಷ್ (20) ಮತ್ತು ಚೇತನ್ (24) ಎಂದು ಗುರುತಿಸಲಾಗಿದೆ.

ದೊಡ್ಡಬಳ್ಳಾಪುರ-ದೇವನಹಳ್ಳಿ ಎಸ್‌ಟಿಆರ್‌ಆರ್ ರಸ್ತೆಯ ಬ್ಯಾಡರಹಳ್ಳಿ ಗೇಟ್ ಬಳಿ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಬಜರಂಗದಳದ ಇಬ್ಬರು ಕಾರ್ಯಕರ್ತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ತುರ್ತು ರಕ್ತದ ಅವಶ್ಯಕತೆ ಇದ್ದ ಹಿನ್ನೆಲೆಯಲ್ಲಿ ಇಬ್ಬರೂ ತಡರಾತ್ರಿ ರಕ್ತದಾನ ಮಾಡಲು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಘಟನೆ ವಿಶ್ವನಾಥಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತಕ್ಕೆ ಕಾರಣವಾದ ಅಪರಿಚಿತ ವಾಹನದ ಪತ್ತೆಗೆ ಮುಂದಾಗಿದ್ದಾರೆ.

Share with Friends
author avatar
Digital Desk