
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಭೇಟಿ
ಉಡುಪಿ, ಜೂ. 13: ಕೇಂದ್ರ ವಿತ್ತ ಸಚಿವೆ Nirmala Sitharaman ಅವರು ಶುಕ್ರವಾರ ಬೆಳಗ್ಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.
ಈ ವೇಳೆ ಪರ್ಯಾಯ ಶೀರೂರು ಮಠಾಧೀಶರಾದ Sri Vedavardhana Teertha Sripadaru ಅವರಿಂದ ಫಲ-ಮಂತ್ರಾಕ್ಷತೆ ಸ್ವೀಕರಿಸಿದ ಸಚಿವೆ, ಮಠದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು.
ಬಳಿಕ ಕೃಷ್ಣ ಮಠದಲ್ಲಿ ದೇವರ ನೈವೇದ್ಯ ತಯಾರಿಕೆಗೆ ಹೊಸದಾಗಿ ನಿರ್ಮಿಸಲಾಗಿರುವ ಅಡುಗೆ ಕೋಣೆ (ಪಾಯದ ಕೋಣೆ)ಯನ್ನು ನಿರ್ಮಲಾ ಸೀತಾರಾಮನ್ ಉದ್ಘಾಟಿಸಿದರು. ಈ ಮೂಲಕ ಮಠದ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತೊಂದು ಸೇರ್ಪಡೆ ನಡೆದಿದೆ.
ಕಾರ್ಯಕ್ರಮದಲ್ಲಿ ಶಿರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ, ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು, Yashpal Suvarna, Gurme Suresh Shetty ಹಾಗೂ ಮಧುಕರ್ ಮುದ್ರಾಡಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು
