Latestಉಡುಪಿ-Udupiರಾಜ್ಯ-Karnataka

ಉತ್ತರಾಖಂಡ ಚಾರಣ: ಮೃತರಲ್ಲಿ ಕುಂದಾಪುರ ಚಾರಣಿಗ

ಉಡುಪಿ: ಉತ್ತರಾಖಂಡದ ಸಹಸ್ತ್ರ ತಾಲ್​ ಶಿಖರಕ್ಕೆ (Uttarakhand Sahasratal) ಚಾರಣಕ್ಕೆ ತೆರಳಿ ಹವಾಮಾನ ವೈಪರಿತ್ಯದಿಂದ ಕುಂದಾಪುರ (Kundapur) ಮೂಲದ ಓರ್ವ ವ್ಯಕ್ತಿಯೂ ಮೃತಪಟ್ಟಿದ್ದಾರೆ.

ಪದ್ಮನಾಭ ಭಟ್ ಮೃತ ಚಾರಣಿಗ. ಇತ ಕುಂದಾಪುರ ತಾಲೂಕಿನ ಕುಂಭಾಶಿ ಮೂಲದವರು. ಚಾರಣಕ್ಕೆ ತೆರಳಿದ 22 ಜನರಲ್ಲಿ ಪದ್ಮನಾಭ ಭಟ್ ಕೂಡ ಇದ್ದರು. ಇವರು ಮೂಲತಃ ಕುಂಭಾಶಿಯವರಾದರೂ ಬೆಂಗಳೂರಿನಲ್ಲಿ ವಾಸವಿದ್ದರು.

ಮೇ 29ರಂದು 22 ಜನರ ತಂಡದೊಂದಿಗೆ ಉತ್ತರಕಾಶಿಯ ಸಹಸ್ತ್ರ ತಾಲ್​ಗೆ ಚಾರಣಕ್ಕೆ ತೆರಳಿದ್ದರು. ಚಾರಣ ಮುಗಿಸಿ ಕೆಳಗೆ ಬರುವಾಗ ಹವಾಮಾನ ವೈಪರಿತ್ಯದಿಂದ ದುರ್ಘಟನೆ ಸಂಭವಿಸಿದೆ. ಅಪಾಯಕ್ಕೆ ಸಿಲುಕಿದ್ದ 13 ಜನರನ್ನು ರಕ್ಷಣೆ ಮಾಡಲಾಗಿದ್ದು, ಈ ದುರ್ಘಟನೆಯಲ್ಲಿ ಒಟ್ಟು 9 ಜನ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಮಂತ್ರಿ ಸ್ಥಾನಕ್ಕೆ ಒತ್ತಡ ಹಾಕಲ್ಲ ಎಂದ ಹೆಚ್‌ಡಿಕೆ

ಬುಧುವಾರ ಐದು ಮೃತದೇಹಗಳು ಸಿಕ್ಕಿದ್ದವು. ಗುರುವಾರ ಮತ್ತೆ ಕಾರ್ಯಾಚರಣೆ ಆರಂಭಿಸಿ ನಾಲ್ವರು ಮೃತದೇಹಗಳನ್ನು ಪತ್ತೆ ಹಚ್ಚಲಾಗಿತ್ತು. 9 ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಇದೀಗ, ದೆಹಲಿಯಿಂದ ಎರಡು ಪ್ರತ್ಯೇಕ ಇಂಡಿಗೋ ವಿಮಾನಗಳಲ್ಲಿ 4 ಮೃತದೇಹಗಳು ಬೆಂಗಳೂರಿಗೆ ಬಂದಿವೆ. ಮೃತರನ್ನು ಪದ್ಮನಾಭ್, ಸಿಂಧೂ, ಸುಜಾತಾ, ವಿನಾಯಕ್ ಎಂದು ಗುರುತಿಸಾಲಗಿದೆ. ಇದನ್ನೂ ಓದಿ:ಸಾಗರ್‌ ಖಂಡ್ರೆ ಗೆಲುವು – ಕಿರಿಯ ಸಂಸದರಾಗಿ ಸಂಸತ್ತಿಗೆ ಎಂಟ್ರಿ

https://youtu.be/S0u4JJ1Hrxg?si=EWOX4vtI-B6fNmqu

ಈಗಾಗಲೇ ಮೂವರ ಮೃತದೇಹಗಳು ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ. ಮತ್ತೆರಡು ಮೃತದೇಹಗಳು ಮಧ್ಯಾಹ್ನ ಬರಲಿವೆ. ಪದ್ಮನಾಭ್ ಅವರ ಮೃತದೇಹವನ್ನು ಕುಂದಾಪುರಕ್ಕೆ ತೆಗೆದುಕೊಂಡು ಹೋಗಲು ಆ್ಯಂಬುಲೇನ್ಸ್ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಉಪ ಚುನಾವಣೆಗೆ ಬಿಜೆಪಿ, ಜೆಡಿಎಸ್ ಮೈತ್ರಿ ಫಿಕ್ಸ್ – ಯಾರಾಗ್ತಾರೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ

https://youtu.be/SsmE2YqYo7g?si=h1WdMU2oPzj90vcw
Share with Friends
author avatar
News Desk