LatestTop Storiesರಾಯಚೂರು

ವಾಲ್ಮೀಕಿ ನಿಗಮ ಹಗರಣ – ಬಿ.ನಾಗೇಂದ್ರ ವಜಾಕ್ಕೆ ಆಗ್ರಹಿಸಿ ಬಿಜೆಪಿಯಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

ರಾಯಚೂರು: ವಾಲ್ಮೀಕಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರಅವರನ್ನು ಸಚಿವ ಸಂಪುಟದಿಂದ ಕೂಡಲೇ ವಜಾಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಇಂದಿನಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದೆ.

ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿನಗರದ ಹಳೆ ಡಿಸಿ ಕಚೇರಿ ಆವರಣದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿಧರಣಿ ನಡೆಯುತ್ತಿದೆ. ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವವರನ್ನು ಸಚಿವ ಸಂಪುಟದಲ್ಲಿ ಮುಂದುವರಿಸಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಧರಣಿಯಲ್ಲಿ ಭಾಗವಹಿಸಿದ್ದ ಬಿಜೆಪಿ ಮುಖಂಡರು ಮಾತನಾಡಿ, ವಾಲ್ಮೀಕಿ ನಿಗಮದಲ್ಲಿ ನಡೆದಿರುವುದು ಸಾಬೀತಾದ ಹಗರಣ. ಆರೋಪ ಸಾಬೀತಾದ ಬಳಿಕವೂ ಬಿ.ನಾಗೇಂದ್ರ ಅವರನ್ನು ಸಚಿವರನ್ನಾಗಿ ಮುಂದುವರಿಸಿರುವುದು ಜನರಿಗೆ ಮಾಡುತ್ತಿರುವ ಅನ್ಯಾಯ ಎಂದು ಕಿಡಿಕಾರಿದರು.ಬಿ.ನಾಗೇಂದ್ರ ಅವರನ್ನು ವಜಾಗೊಳಿಸುವವರೆಗೆ ಹೋರಾಟ ಮುಂದುವರಿಸುವ ಎಚ್ಚರಿಕೆಯನ್ನು ನೀಡಿದರು.

ಅನಿರ್ದಿಷ್ಟಾವಧಿ ಧರಣಿಯ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಒತ್ತಡ ಹೇರುವುದಾಗಿ ಬಿಜೆಪಿ ಜಿಲ್ಲಾ ಘಟಕ ತಿಳಿಸಿದೆ. ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

Share with Friends
author avatar
Digital Desk