BlogEntertainmentLatestTop Storiesಸ್ಯಾಂಡಲ್​ವುಡ್-Sandalwood

‘ಪೆಪೆ’ ಚಿತ್ರಕ್ಕೆ ‘A’ ಸರ್ಟಿಫಿಕೇಟ್

ವಿನಯ್ ರಾಜ್ ಕುಮಾರ್ ನಟಿಸಿರುವ ಬಹುನಿರೀಕ್ಷಿತ ಚಿತ್ರ ಪೆಪೆ ಚಿತ್ರ ಸೆನ್ಸಾರ್ ಪಾಸ್ ಮಾಡಿದೆ. ಟೈಟಲ್ ಹಾಗೂ ಟೀಸರ್ ನಿಂದಲೇ ಕುತೂಹಲ ಹೆಚ್ಚಿಸಿರುವ ಈ ಸಿನಿಮಾಗೆ ಸೆನ್ಸಾರ್ ಮಂಡಳಿಯಿಂದ ಪೆಪೆಗೆ ಎ ಸರ್ಟಿಫಿಕೇಟ್ ನೀಡಿದೆ.

ವಿನಯ್ ರಾಜ್ ಕುಮಾರ್ ಮಾಸ್ ಅವತಾರದಲ್ಲಿ ಮಿಂಚಿರುವ ಈ ಚಿತ್ರಕ್ಕೆ ಯುವ ನಿರ್ದೇಶಕ ಶ್ರೀಲೇಶ್ ಎಸ್ ನಾಯರ್ ನಿರ್ದೇಶನವಿದೆ. ಹಳ್ಳಿ ಬ್ಯಾಕ್‌ಡ್ರಾಪ್‌ನಲ್ಲಿ ನಡೆಯುವ ಚಿತ್ರ ಇದಾಗಿದ್ದು, ಇದುವರೆಗೂ ಈ ರೀತಿಯ ಪಾತ್ರದಲ್ಲಿ ವಿನಯ್ ಕಾಣಿಸಿಕೊಂಡಿಲ್ಲ.

ಈ ಚಿತ್ರದಲ್ಲಿ ನಾಯಕಿಯಾಗಿ ಕಾಜಲ್‌ ಕುಂದರ್‌ ನಟಿಸಿದ್ದು, ಮಯೂರ್‌ ಪಟೇಲ್‌, ಯಶ್‌ ಶೆಟ್ಟಿ, ಬಲ ರಾಜ್‌ವಾಡಿ, ಮೇದಿನಿ ಕೆಳಮನೆ, ಅರುಣಾ ಬಾಲರಾಜ್‌, ನವೀನ್‌ ಡಿ. ಪಡೀಲ್‌ರನ್ನು ಒಳಗೊಂಡ ತಾರಾಬಳಗವಿದೆ. ‘ಪೆಪೆ’ ಚಿತ್ರಕ್ಕೆ ಅಭಿಷೇಕ್‌ ಜಿ. ಕಾಸರಗೋಡು ಕ್ಯಾಮೆರಾ ವರ್ಕ್, ಪೂರ್ಣಚಂದ್ರ ತೇಜಸ್ವಿಯವರ ಸಂಗೀತ ನಿರ್ದೇಶನವಿದೆ.

ಡಾ. ರವಿವರ್ಮ, ಚೇತನ್‌ ಡಿಸೋಜಾ, ಡಿಫ್ರೆಂಟ್‌ ಡ್ಯಾನಿ, ನರಸಿಂಹ ಅವರ ತಂಡ ಚಿತ್ರದ ಸಾಹಸ ದೃಶ್ಯಗಳನ್ನು ನಿರ್ದೇಶನ ಮಾಡಿದೆ. ಬೆಂಗಳೂರು, ಮೈಸೂರು, ಕೊಡಗು, ಸಕಲೇಶಪುರಗಳಲ್ಲಿ‘ಪೆಪೆ’ ಸಿನಿಮಾವನ್ನು ಸೆರೆಹಿಡಿಯಲಾಗಿದೆ. ಉದಯ್‌ ಸಿನಿ ವೆಂಚರ್‌, ದೀಪ ಫಿಲ್ಮ್ಸ್ ಬ್ಯಾನರ್‌ನಡಿ ಉದಯ್ ಶಂಕರ್.ಎಸ್ ಹಾಗೂ ಕೋಲಾರದ ಬಿ.ಎಮ್.ಶ್ರೀರಾಮ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ

Share with Friends
author avatar
News Desk