Latestಚುನಾವಣೆ-Electionರಾಷ್ಟ್ರೀಯ-National

ಮತವನ್ನು ನಮ್ಮ ಪ್ರಜಾಪ್ರಭುತ್ವವ ಬಲಪಡಿಸಲು ಚಲಾಯಿಸಿ: ಮೋದಿ ಕರೆ

ನವದೆಹಲಿ: ಲೋಕಸಭಾ ಚುನಾವಣೆಯ (Lokasabha Election) 4 ನೇ ಹಂತದ ಮತದಾನ ಇಂದು ಪ್ರಾರಂಭವಾಗುತ್ತಿದ್ದಂತೆ ಪ್ರಜಾಪ್ರಭುತ್ವವನ್ನು ಬಲಪಡಿಸಲು ಜನರು ತಮ್ಮ ಕರ್ತವ್ಯವನ್ನು ಮಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಕರೆ ನೀಡಿದ್ದಾರೆ.

ಈ ಕ್ಷೇತ್ರಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಲಿದ್ದಾರೆ ಎಂಬ ವಿಶ್ವಾಸವನ್ನು ಪ್ರಧಾನಿ ವ್ಯಕ್ತಪಡಿಸಿದ್ದು, ಈ ಕುರಿತು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಲೋಕಸಭಾ ಚುನಾವಣೆಯ ಇಂದಿನ 4 ನೇ ಹಂತದಲ್ಲಿ, 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 96 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

https://youtu.be/lAoWpSgCBCs?si=JcuXvjHV36jkQa0t

ಈ ಕ್ಷೇತ್ರಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುತ್ತಾರೆ. ಈ ಮೂಲಕ ಯುವ ಮತದಾರರು ಮತ್ತು ಮಹಿಳಾ ಮತದಾರರು ಶಕ್ತಿ ನೀಡಲಿದ್ದಾರೆ ಎಂದು ನನಗೆ ಖಾತ್ರಿಯಿದೆ. ಬನ್ನಿ ಎಲ್ಲರೂ ನಮ್ಮ ಕರ್ತವ್ಯವನ್ನು ಮಾಡೋಣ ಮತ್ತು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸೋಣ ಎಂದು ಹೇಳಿ ಬರೆದುಕೊಂಡಿದ್ದಾರೆ. . ಇದನ್ನೂ ಓದಿ: Kidnap Case ಗೆ ಟ್ವಿಸ್ಟ್; ಯಾರೂ ಬಲವಂತವಾಗಿ ಕರೆದೊಯ್ದಿಲ್ಲ, ಕಿಡ್ನ್ಯಾಪ್ ಮಾಡಿಲ್ಲ: ಸಂತ್ರಸ್ತೆ ಸ್ಪೋಟಕ ಹೇಳಿಕೆ

ಇಂದು ಅಂಧ್ರಪ್ರದೇಶದಲ್ಲಿ ವಿಧಾನಸಭಾ ಚುನಾವಯೂ ನಡೆಯುತ್ತಿದ್ದು, ಆದರಲ್ಲಿಯೂ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿವಂತೆ ಮೋದಿ ಕರೆ ನೀಡಿದ್ದಾರೆ. ಬಳಿಕ ಅವರು ವಿಶೇಷವಾ ನಮ್ಮ ಪ್ರಜಾಸತ್ತಾತ್ಮಕ ಮನೋಭಾವವನ್ನು ಇನ್ನಷ್ಟು ಹೆಚ್ಚಿಸಲಿ ಎಂದರು. . ಇದನ್ನೂ ಓದಿ: ಇಂದು ಹೆಚ್‌ಡಿ ರೇವಣ್ಣ ಬೇಲ್ ಅರ್ಜಿ ವಿಚಾರಣೆ … ಜೈಲಾ ಬೇಲಾ?

https://youtu.be/PsNwh7YFS5Y?si=An_zXlZf8_sBjMK3

ಒಡಿಶಾದಲ್ಲಿ ಅಸೆಂಬ್ಲಿ ಚುನಾವಣೆಗಳು ಪ್ರಾರಂಭವಾಗುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಒಡಿಶಾದ ಜನರಿಗೂ ಕರೆ ನೀಡಿದರು. ಒಡಿಶಾದಲ್ಲಿ ಇಂದು ವಿಧಾನಸಭೆ ಚುನಾವಣೆ ಆರಂಭವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ನಾನು ಈ ರಾಜ್ಯದ ಜನತೆಗೆ ಕರೆ ನೀಡುತ್ತೇನೆ. ನಿಮ್ಮ ಮತವೇ ನಿಮ್ಮ ಧ್ವನಿ ಎಂದು ಪ್ರಧಾನಿ ಹೇಳಿದರು. ಇದನ್ನೂ ಓದಿ: ಮುಂದಿನ 5 ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ

Share with Friends
author avatar
News Desk