Latestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಯಾವುದೇ ದೇಶದಲ್ಲಿದ್ದರೂ ಪ್ರಜ್ವಲ್ ರೇವಣ್ಣನ್ನು ಹಿಡಿದು ತರುತ್ತೆವೆ: ಸಿದ್ದರಾಮಯ್ಯ

ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಅವರು ಯಾವುದೇ ದೇಶದಲ್ಲಿದ್ದರೂ ಹಿಡಿದು ತರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ಸಂಬಂಧ ನಾನು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದೇನೆ. ಪಾಸ್‌ಪೋರ್ಟ್ ರದ್ದತಿ ಅಧಿಕಾರವಿರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ. ಆದರೆ ಪ್ರಜ್ವಲ್ ರೇವಣ್ಣ ಅವರನ್ನು ಕೇಂದ್ರ ಸರಕಾರವೇ ರಕ್ಷಣೆ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಇದನ್ನೂ ಓದಿ: ಕುಡಿದ ಅಮಲಿನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ; ಸ್ನೇಹಿತನನ್ನೆ ಕೊಲೆ ಮಾಡಿದ ರೌಡಿಶೀಟರ್

https://youtu.be/L_NVdLRw1yE?si=LYdOgS_fxVMwPCQO

ಹೆಚ್‌ಡಿ ಕುಮಾರಸ್ವಾಮಿ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ನನ್ನ ಮಗ ಎಂದು ಹೇಳಿದ್ದರು. ನನ್ನ ಮಗ ನಿಖಿಲ್ ಬೇರೆ ಅಲ್ಲ, ಪ್ರಜ್ವಲ್ ರೇವಣ್ಣ ಬೇರೆ ಅಲ್ಲ ಅಂದಿದ್ದರು. ಈಗ ಅವರ ಕುಟುಂಬ ಬೇರೆ ನಮ್ಮ ಕುಟುಂಬ ಬೇರೆ ಅಂತಿದ್ದಾರೆ. ಪ್ರಜ್ವಲ್ ಪ್ರಕರಣ ಮೊದಲೇ ಬಿಜೆಪಿಗೂ ಗೊತ್ತಿತ್ತು. ಆದರೂ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡರು. ಈಗ ಯಾಕೆ ಕ್ರಮ ವಹಿಸುತ್ತಲ್ಲ ಎಂದು ಪೆಶ್ನಿಸಿ ಅವರು ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಕೊನೆಗೂ ‘ಬೆಂದ’ಕಾಳೂರಿಗೆ ತಂಪನ್ನೇರೆದ ವರುಣಾ…! ನಿನ್ನೆ ಸಂಜೆ ಸುಮಾರು 3 ಗಂಟೆಗಳ ಕಾಲ ಮಳೆ

https://youtu.be/nI2P8jWVlJE?si=a8W7fcuCaRsbMIpU
Share with Friends
author avatar
News Desk