LatestTop Storiesಯಾದಗಿರಿ

ಸಾಮೂಹಿಕ ಶೌಚಾಲಯಕ್ಕಾಗಿ ರಸ್ತೆ ಬಂದ್ ಮಾಡಿ ಬೀದಿಗಿಳಿದ ಮಹಿಳೆಯರು!

ಯಾದಗಿರಿ: ದೇಶದಲ್ಲಿ ಸ್ವಚ್ಛ ಭಾರತದ ಹೆಸರಿನಲ್ಲಿ ಕೋಟಿ ಕೋಟಿ ಹಣ ಖರ್ಚಾಗುತ್ತಿದ್ದರೂ, ಗ್ರಾಮೀಣ ಭಾಗದ ಮಹಿಳೆಯರ ಮೂಲಭೂತ ಸಮಸ್ಯೆಗೆ ಮಾತ್ರ ಇನ್ನೂ ಮುಕ್ತಿ ಸಿಕ್ಕಿಲ್ಲ. ಇದಕ್ಕೆ ಜ್ವಲಂತ ಉದಾಹರಣೆಯಾಗಿ ನಿಲ್ಲುತ್ತದೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರ ಗ್ರಾಮದಲ್ಲಿ ನಡೆದ ಈ ಘಟನೆ. ಗ್ರಾಮದಲ್ಲಿ ಕನಿಷ್ಠ ಶೌಚಾಲಯ ವ್ಯವಸ್ಥೆಯೂ ಇಲ್ಲದಿರುವುದನ್ನು ಖಂಡಿಸಿ ಇಡೀ ಗ್ರಾಮದ ಮಹಿಳೆಯರು ಒಟ್ಟಾಗಿ ಬೀದಿಗಿಳಿದು ಆಕ್ರೋಶ ಹೊರಹಾಕಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲೂ ಖಾಲಿ ಜಾಗಗಳಿಲ್ಲದೆ, ರಸ್ತೆ ಬದಿಗಳಲ್ಲೇ ಮಹಿಳೆಯರು ಶೌಚಕ್ಕೆ ಹೋಗಬೇಕಾದ ಅತ್ಯಂತ ಮುಜುಗರದ ಪರಿಸ್ಥಿತಿ ನಿರ್ಮಾಣವಾಗಿದೆ.
​ಗ್ರಾಮ ಪಂಚಾಯತ್ ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ವಿರುದ್ಧ ಮಹಿಳಾ ಮಣಿಯರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ತಕ್ಷಣವೇ ಶೌಚಾಲಯ ನಿರ್ಮಾಣ ಮಾಡದಿದ್ದರೆ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಮಹಿಳೆಯರು ಎಚ್ಚರಿಕೆ ನೀಡಿದ್ದಾರೆ.

Share with Friends
author avatar
Digital Desk