BlogLatestರಾಜ್ಯ-Karnataka

ಕರಾವಳಿ ಜಿಲ್ಲೆಗಳು ಸೇರಿ ರಾಜ್ಯದ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು : ಫೆಂಗಲ್‌ ಚಂಡಮಾರುತ ಪ್ರಭಾವವು  ಕಡಿಮೆಯಾದ ಬಳಿಕ ರಾಜ್ಯದಲ್ಲಿ ಇಳಿಮುಖವಾಗಿದ್ದ ಮಳೆ ಮತ್ತೆ ಅಬ್ಬರಿಸುವ ಮುನ್ಸೂಚನೆ ಸಿಕ್ಕಿದೆ. ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಪಶ್ಚಿಮ-ವಾಯುವ್ಯದ ಶ್ರೀಲಂಕಾ, ತಮಿಳುನಾಡು ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಇಂದು ಮತ್ತು ನಾಳೆ ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಕೊಡಗು, ತುಮಕೂರು, ಕೋಲಾರ, ಚಿತ್ರುದುರ್ಗ, ಮಂಡ್ಯ, ಮೈಸೂರು, ರಾಮನಗರ ಹಾಗೂ ಚಾಮರಾಜನಗರ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇಂದು (ಡಿ.12) ರಾಜ್ಯದ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ.

ಬೆಂಗಳೂರು ನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ರಾಮನಗರ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಕಡೆ ಸಾಧಾರಣ ಮಳೆಯಾಗುವ ಸಾಧೆತೆಯಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಮಳೆಯಾಗಲಿದೆ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

 ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಂಜು ಇರುವ ಸಾಧ್ಯತೆಯಿದೆ.

Share with Friends
author avatar
News Desk