BlogLatestರಾಷ್ಟ್ರೀಯ-National

ರಸ್ತೆಯಲ್ಲೇ ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರವೆಸಗಿದ ಕಾಮುಕ, ವಿಡಿಯೋ ವೈರಲ್

ಉಜ್ಜಯಿನಿ : ಮಹಿಳೆಗೆ ಮದ್ಯ ಕುಡಿಸಿ ನಂತರ ರಸ್ತೆಯಲ್ಲೇ ಅತ್ಯಾಚಾರವೆಸಗಿದ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ. ಈ ಕೃತ್ಯ ಎಸಗುತ್ತಿರುವ ವೀಡಿಯೋ ಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆಯ ದೂರಿನ ಆಧಾರದ ಮೇಲೆ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

https://twitter.com/i/status/1831727313525887298

ಮಹಿಳೆ ಹೇಳಿಕೆ ಪ್ರಕಾರ ಯುವಕ ತನ್ನನ್ನು ಮದುವೆಯಾಗುವುದಾಗಿ ಆಮಿಷ ಒಡ್ಡಿ ನಂತರ ಮದ್ಯ ಕುಡಿಸಿ ನಂತರ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ. ಆರೋಪಿ ಲೋಕೇಶ್ ಎಂದು ಹೇಳಲಾಗಿದ್ದು, ಕೃತ್ಯ ಎಸಗಿ ಅಲ್ಲಿಂದ ಪರಾರಿಯಾಗಿದ್ದಾನೆ. ವಿಡಿಯೋ ಆಧರಿಸಿ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share with Friends
author avatar
News Desk