Crime NewsLatestTop Storiesರಾಷ್ಟ್ರೀಯ-National

ಮೋಸ್ಟ್ ವಾಂಟೆಡ್ ಉಗ್ರ ಝಕೀರ್ ಗನಾಯಿ ಫಿನಿಶ್‌!

ಶ್ರೀನಗರ,ಜು.8: ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಕಮಾಂಡರ್ ಝಕೀರ್ ಗನಾಯಿಯನ್ನು ಹೊಡೆದುರುಳಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶೋಧ ಕಾರ್ಯಾಚರಣೆ


ಸದ್ಯ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಅಡಗಿರುವ ನಿಖರ ಮಾಹಿತಿ ಆಧಾರದ ಮೇಲೆ ಜಂಟಿ ಶೋಧ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.ಹೀಗಾಗಿ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ ವೇಳೆ ಮೋಸ್ಟ್ ವಾಂಟೆಡ್ ಉಗ್ರ ಝಕೀರ್ ಗನಾಯಿ ಹತನಾಗಿದ್ದಾನೆ.

ಭದ್ರತಾ ಪಡೆ ಮತ್ತು ಜಮ್ಮು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆ


ಇನ್ನು ಕಣಿವೆ ರಾಜ್ಯದಲ್ಲಿ ಹಲವು ಭಯೋತ್ಪಾದಕ ಕೃತ್ಯಗಳು, ಸಾರ್ವಜನಿಕರ ಮೇಲಿನ ದಾಳಿ ಮತ್ತು ಯುವಕರನ್ನು ದಾರಿ ತಪ್ಪಿಸುವ ಕೆಲಸಗಳಲ್ಲಿ ಝಕೀರ್ ಗನಾಯಿ ಭಾಗಿಯಾಗಿದ್ದ ಎನ್ನಲಾಗಿದೆ. ಈತನ ನಿರಂತರ ಹತ್ಯೆಯು ಲಷ್ಕರ್ ಸಂಘಟನೆಗೆ ದೊಡ್ಡ ಹೊಡೆತ ನೀಡಿದಂತಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Share with Friends
author avatar
Digital Desk